Judges 9:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ಆ ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿಗೆಯ ಮೇಲೆ ಹತ್ತಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.
Kannada BSI Bible 2016
ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ ಅದರೊಳಗೆ ಹೊಕ್ಕು ಬಾಗಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.
Kannada Bible (KNCL) BSI 2016
ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಗೋಪುರವಿತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ ಅದರೊಳಗೆ ಹೊಕ್ಕು ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು. ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ, ಅದರಲ್ಲಿ ಹೊಕ್ಕು, ತಮ್ಮ ಹಿಂದಿನಿಂದ ಬಾಗಿಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.