Judges 9:54 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.
Kannada BSI Bible 2016
ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.
Kannada Bible (KNCL) BSI 2016
ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.