Judges 9:57 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾವುನು ನುಡಿದಂತೆಯೇ ಆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.
Kannada BSI Bible 2016
ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಕೆವಿುನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.
Kannada Bible (KNCL) BSI 2016
ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಶೆಕೆಮಿನವರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದರು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂದಿತು.