Judges 9:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾವುನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾವುನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.
Kannada BSI Bible 2016
ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ - ಶೆಕೆವಿುನವರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮಗೆ ಕಿವಿಗೊಡುವನು.
Kannada Bible (KNCL) BSI 2016
ಯೋತಾಮನು ಇದನ್ನು ಕೇಳಿ, ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಶೆಕೆಮಿನ ಜನರೇ, ನನ್ನ ಮಾತಿಗೆ ಕಿವಿಗೊಡಿ; ಆಗ ದೇವರೂ ನಿಮ್ಮ ಮೊರೆಗೆ ಕಿವಿಗೊಡುವರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.