Lamentations 1:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.
Kannada BSI Bible 2016
ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.
Kannada Bible (KNCL) BSI 2016
“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.