Lamentations 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
Kannada BSI Bible 2016
ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ವಿಪತ್ತುಗಳಿಂದ ಅಳುವೆನು, ನನ್ನನ್ನು ಸಂತೈಸಿ ದಣುವಾರಿಸತಕ್ಕವನು ದೂರವಾಗಿರುವದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
Kannada Bible (KNCL) BSI 2016
“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.