Lamentations 1:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.
Kannada BSI Bible 2016
ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.
Kannada Bible (KNCL) BSI 2016
“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.