Lamentations 1:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!
Kannada BSI Bible 2016
ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!
Kannada Bible (KNCL) BSI 2016
ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.