Lamentations 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.
Kannada BSI Bible 2016
ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ.
Kannada Bible (KNCL) BSI 2016
ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.