Lamentations 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.
Kannada BSI Bible 2016
ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇವಿುನ ಯುವತಿಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.
Kannada Bible (KNCL) BSI 2016
ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.