Lamentations 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.
Kannada BSI Bible 2016
ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರು ಸುರಿದು ಸುರಿದು ನನ್ನ ಕಣ್ಣು ಇಂಗಿಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಯುವತಿಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದದರಿಂದ ನನ್ನ ಕರುಳು ಕರಗಿದೆ.
Kannada Bible (KNCL) BSI 2016
ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.