Lamentations 2:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮ್ ನಗರದ ಗೋಡೆಯೇ, ಮನಃಪೂರ್ವಕವಾಗಿ ಯೆಹೋವನಲ್ಲಿ ಮೊರೆಯಿಡು. ನಿನ್ನ ಕಣ್ಣೀರು ಹಗಲಿರುಳು ನದಿಯಂತೆ ಹರಿಯಲಿ, ನಿಲ್ಲಿಸಬೇಡ. ನಿನ್ನ ಕಣ್ಣುಗಳಿಗೆ ವಿರಾಮ ಸಿಗುವುದು ಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;
Kannada BSI Bible 2016
ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; ಚೀಯೋನ್‍ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;
Kannada Bible (KNCL) BSI 2016
ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹೃದಯವು ಕರ್ತದೇವರ ಕಡೆಗೆ ಕೂಗಿ, ಚೀಯೋನಿನ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನಿನಗೆ ವಿಶ್ರಾಂತಿ ಬೇಡ, ನಿನ್ನ ಕಣ್ಣ ರೆಪ್ಪೆಯನ್ನು ಮುಚ್ಚಬೇಡ.