Lamentations 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?
Kannada BSI Bible 2016
ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?
Kannada Bible (KNCL) BSI 2016
ಹೇ, ಸರ್ವೇಶ್ವರಾ ಕಟಾಕ್ಷಿಸು! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?