Lamentations 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.
Kannada BSI Bible 2016
ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.
Kannada Bible (KNCL) BSI 2016
ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.