Lamentations 2:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.
Kannada BSI Bible 2016
ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.
Kannada Bible (KNCL) BSI 2016
ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.