Lamentations 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪಾಲಿಗಂತೂ ಯೆಹೋವನು ಆಕ್ರಮಣಮಾಡಲು ಸಿದ್ಧವಾಗಿರುವ ಕರಡಿಯಂತೆಯೂ ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.
Kannada BSI Bible 2016
ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.
Kannada Bible (KNCL) BSI 2016
ನನಗಾಗಿ ಆತ ಹೊಂಚುಹಾಕುತ್ತಿರುವನು ಕರಡಿಯಂತೆ ಗುಹೆಯಲ್ಲಿ ಅಡಗಿಕೊಂಡಿರುವನು ಸಿಂಹದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗೆ ಹೊಂಚು ಹಾಕುವ ಕರಡಿಯ ಹಾಗೆಯೂ, ಗುಪ್ತ ಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾರೆ.