Lamentations 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯೂ ವ್ಯರ್ಥವಾಯಿತು” ಅಂದುಕೊಂಡೆನು.
Kannada BSI Bible 2016
ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ನನ್ನ ಶಕ್ತಿಯು ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯು ವ್ಯರ್ಥ ಅಂದುಕೊಂಡೆನು.
Kannada Bible (KNCL) BSI 2016
ನಾನು ಇಂತೆಂದುಕೊಂಡೆ: ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು ಸರ್ವೇಶ್ವರನಲ್ಲಿ ನಾನಿತ್ತ ನಿರೀಕ್ಷೆ ವ್ಯರ್ಥವಾಯಿತು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಯ್ಯೋ, ನನ್ನ ಬಲವು ಮತ್ತು ನನ್ನ ನಿರೀಕ್ಷೆಯು ಯೆಹೋವ ದೇವರಿಂದ ನಾಶವಾದವು,” ಎಂದು ನಾನು ಹೇಳಿದೆನು.