Lamentations 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು. ನಮ್ಮ ಕೊನೆಯು ಬಂದಿತು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.
Kannada BSI Bible 2016
ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು.
Kannada Bible (KNCL) BSI 2016
ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.