Lamentations 4:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.
Kannada BSI Bible 2016
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು; ಭೂಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.
Kannada Bible (KNCL) BSI 2016
ಹಸಿವೆಯಿಂದ ಹತರಾದವರಿಗಿಂತ ಖಡ್ಗದಿಂದ ಹತರಾದವರು ಲೇಸು. ತುತ್ತಾದರು ಅವರು ಕ್ಷಾಮಕ್ಕೆ ಕ್ಷಯಿಸಿಹೋದರು ನೆಲದ ಗೆಡ್ಡೆಗೆಣಸೂ ಸಿಗದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.