Leviticus 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯಾಜಕನು ಆ ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
Kannada BSI Bible 2016
ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಪಶುವಿನ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
Kannada Bible (KNCL) BSI 2016
ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.