Leviticus 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
Kannada BSI Bible 2016
ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಇರಬೇಕು.
Kannada Bible (KNCL) BSI 2016
ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿ ಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಿರಲಿ, ಅಥವಾ ಮರಿ ಪಾರಿವಾಳ ಆಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.