Leviticus 1:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಕಾಣಿಕೆಯನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
Kannada BSI Bible 2016
ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಕುತ್ತಿಗೆ ಮುರಿದು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹಿಂಡಬೇಕು;
Kannada Bible (KNCL) BSI 2016
ಯಾಜಕನು ಅದನ್ನು ಬಲಿಪೀಠದ ಬಳಿಗೆ ತಂದು ಕುತ್ತಿಗೆ ಮುರಿದು ಬಲಿಪೀಠದ ಮೇಲೆ ಹೋಮಮಾಡಲಿ; ಅದರ ರಕ್ತವನ್ನು ಬಲಿಪೀಠದ ಪಕ್ಕದಲ್ಲಿ ಹಿಂಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.