Leviticus 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
Kannada BSI Bible 2016
ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಜ್ಞಾಪಿಸಬೇಕಾದದ್ದೇನಂದರೆ - ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅದನ್ನು ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ತೆಗೆದುಕೊಂಡು ಸಮರ್ಪಿಸಬೇಕು.
Kannada Bible (KNCL) BSI 2016
“ನಿಮ್ಮಲ್ಲಿ ಯಾರಾದರೂ ಸರ್ವೇಶ್ವರನಿಗೆ ಒಂದು ಪ್ರಾಣಿಯನ್ನು ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ ಆಡುಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.