Leviticus 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
Kannada BSI Bible 2016
ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.
Kannada Bible (KNCL) BSI 2016
ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.