Leviticus 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಆರೋನನ ಪುತ್ರರಲ್ಲಿ ನಾದ್ವಾ್ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.
Kannada BSI Bible 2016
ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ
Kannada Bible (KNCL) BSI 2016
ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು.