Leviticus 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಯ ಮೂಲಕ ಇಸ್ರೇಲ್ ಜನರಿಗೆ ಕೊಟ್ಟ ಎಲ್ಲಾ ಕಟ್ಟಳೆಗಳನ್ನು ಅವರಿಗೆ ಬೋಧಿಸುವುದು ನಿನ್ನ ಜವಾಬ್ದಾರಿಯಾಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.
Kannada BSI Bible 2016
ನೀವು ಇಸ್ರಾಯೇಲ್ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು.