Leviticus 10:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದನ್ನು ಪವಿತ್ರವಾದ ಸ್ಥಳದಲ್ಲಿ ಮಾತ್ರ ತಿನ್ನಬೇಕು. ಅದು ಯೆಹೋವನಿಗಾಗಿ ಅಗ್ನಿಯಲ್ಲಿ ಹೋಮವಾದ ಸಮರ್ಪಣೆಗಳಲ್ಲಿ ಒಂದು ಭಾಗವಾಗಿದೆ. ಯೆಹೋವನಿಗಾಗಿ ಬೆಂಕಿಯ ಮೂಲಕ ಸಮರ್ಪಿಸಿದವುಗಳಲ್ಲಿ ನಿನಗೂ ನಿನ್ನ ಗಂಡುಮಕ್ಕಳಿಗೂ ಇದು ಸೇರತಕ್ಕ ಪಾಲಾಗಿದೆ. ನಿಮಗೆ ಈ ಕಟ್ಟಳೆಯನ್ನು ಕೊಡಲು ನನಗೆ ಆಜ್ಞಾಪಿಸಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.
Kannada BSI Bible 2016
ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಮಹಾಪರಿಶುದ್ಧವಾಗಿರುವದರಿಂದ ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸುವ ಹೋಮದ್ರವ್ಯಗಳಲ್ಲಿ ಅದು ನಿನಗೂ ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.
Kannada Bible (KNCL) BSI 2016
ಅದು ಮಹಾಪರಿಶುದ್ಧವಾಗಿರುವುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ಊಟಮಾಡಿ. ಜನರು ಸರ್ವೇಶ್ವರನಿಗೆ ಸಮರ್ಪಿಸುವ ಹೋಮದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲತಕ್ಕದೆಂದು ಅಪ್ಪಣೆಯಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ದಹನ ಮಾಡಿದ ಯೆಹೋವ ದೇವರ ಯಜ್ಞಗಳಲ್ಲಿ ಇವು ನಿನಗೂ ನಿನ್ನ ಪುತ್ರರಿಗೂ ಸಲ್ಲತಕ್ಕವುಗಳು. ಏಕೆಂದರೆ ಹಾಗೆ ನನಗೆ ಆಜ್ಞೆಯಾಗಿದೆ.