Leviticus 10:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಪಾಪಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಕುರಿತು ವಿಚಾರಿಸಿದಾಗ, ಅದನ್ನು ಸುಟ್ಟುಬಿಟ್ಟರೆಂದು ಕೇಳಿ ಆರೋನನ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್‌ರವರ ಮೇಲೆ ಬಹುಕೋಪಗೊಂಡನು. ಮೋಶೆಯು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,
Kannada BSI Bible 2016
ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
[ಜನರೆಲ್ಲರಿಗೋಸ್ಕರ] ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತನ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು -
Kannada Bible (KNCL) BSI 2016
ಜನರೆಲ್ಲರ ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಬಗ್ಗೆ ಅದು ಏನಾಯಿತೆಂದು ಮೋಶೆ ವಿಚಾರಿಸಿದಾಗ ಅದನ್ನು ಸುಟ್ಟುಬಿಟ್ಟರೆಂದು ತಿಳಿದುಬಂದಿತು. ಇದನ್ನು ಕೇಳಿ ಮೋಶೆ, ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ,