Leviticus 10:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು”‘ ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
Kannada BSI Bible 2016
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
Kannada Bible (KNCL) BSI 2016
ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.