Leviticus 10:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರ ಹೆಸರು ಮೀಶಾಯೇಲ್ ಮತ್ತು ಎಲ್ಸಾಫಾನ್. ಮೋಶೆಯು ಆ ಪುತ್ರರಿಗೆ, “ಪವಿತ್ರಸ್ಥಳದ ಮುಂದೆ ಬಿದ್ದಿರುವ ನಿಮ್ಮ ಸಹೋದರರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.
Kannada BSI Bible 2016
ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಸಾಫಾನನನ್ನೂ ಕರಿಸಿ - ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು ಅಂದನು.
Kannada Bible (KNCL) BSI 2016
ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫನನ್ನು ಕರೆಸಿ, “ನೀವು ಇಲ್ಲಿಗೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜೀಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಜಾಫಾನನನ್ನೂ ಕರೆದು, “ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತುಕೊಂಡು ಹೋಗಿರಿ,” ಎಂದನು.