Leviticus 10:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆಯು ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಇಸ್ರೇಲರೆಲ್ಲರೂ ನಿಮ್ಮ ಬಂಧುಗಳು. ಯೆಹೋವನು ನಾದ್ವಾ್ ಮತ್ತು ಅಬೀಹು ಅವರನ್ನು ಸುಟ್ಟುಹಾಕಿದ್ದರ ಬಗ್ಗೆ ಅವರು ದುಃಖಿಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
Kannada BSI Bible 2016
ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್‌ನಿಗೂ ಈತಾಮಾರ್‌ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸತ್ತೀರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾದೀತು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲ್ಯರ ಮನೆತನದವರೇ ದುಃಖಿಸಲಿ.
Kannada Bible (KNCL) BSI 2016
ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.