Leviticus 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀವು ದೇವದರ್ಶನಗುಡಾರದ ಬಾಗಿಲನ್ನು ಸಹ ಬಿಟ್ಟುಹೋಗಬಾರದು. ಇಲ್ಲವಾದರೆ ನೀವು ಸಾಯುವಿರಿ! ಯಾಕೆಂದರೆ, ಯೆಹೋವನ ಅಭಿಷೇಕತೈಲವು ನಿಮ್ಮ ಮೇಲಿದೆ” ಎಂದು ಹೇಳಿದನು. ಆದ್ದರಿಂದ ಆರೋನ, ಎಲ್ಲಾಜಾರ್ ಮತ್ತು ಈತಾಮಾರ್ ಮೋಶೆಯ ಮಾತಿಗೆ ವಿಧೇಯರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.
Kannada BSI Bible 2016
ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ದೇವದರ್ಶನದ ಗುಡಾರದ ಬಾಗಲನ್ನು ಬಿಟ್ಟು ಹೋಗಬಾರದು; ಹೋದರೆ ಸತ್ತೀರಿ ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡಕೊಂಡರು.
Kannada Bible (KNCL) BSI 2016
ಸರ್ವೇಶ್ವರನ ಅಭಿಷೇಕತೈಲ ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು, ಹೋದರೆ ಸಾಯುವಿರಿ,” ಎಂದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಮರಣ ಹೊಂದದಂತೆ ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. ಏಕೆಂದರೆ ಯೆಹೋವ ದೇವರ ಅಭಿಷೇಕ ತೈಲವು ನಿಮ್ಮ ಮೇಲಿದೆ,” ಎಂದನು. ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.