Leviticus 10:9 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಮತ್ತು ನಿನ್ನ ಪುತ್ರರು ದೇವದರ್ಶನದ ಗುಡಾರದೊಳಗೆ ಬರುವಾಗ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು. ನೀವು ಅವುಗಳನ್ನು ಕುಡಿದರೆ ಸಾಯುವಿರಿ. ಈ ಕಟ್ಟಳೆಯು ನಿಮ್ಮ ಸಂತತಿಯವರಿಗೆ ಶಾಶ್ವತವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.
Kannada BSI Bible 2016
ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
Kannada Bible (KNCL) BSI 2016
“ನೀನೂ ನಿನ್ನ ಪುತ್ರರು ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು, ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತ ನಿಯಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ.