Leviticus 11:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Kannada BSI Bible 2016
ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಮುಂದೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.
Kannada Bible (KNCL) BSI 2016
ಇದಲ್ಲದೆ ಈ ಕೆಳಗೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.