Leviticus 11:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಕೆಲವು ಪ್ರಾಣಿಗಳಿಗೆ ಸೀಳಿದ ಕಾಲ್ಗೊರಸುಗಳು ಇವೆ. ಆದರೆ ಕಾಲ್ಗೊರಸುಗಳು ಸರಿಯಾಗಿ ಎರಡು ಭಾಗಗಳಾಗಿರುವುದಿಲ್ಲ. ಕೆಲವು ಪ್ರಾಣಿಗಳು ಮೆಲಕು ಹಾಕುವುದಿಲ್ಲ. ಕೆಲವು ಪ್ರಾಣಿಗಳಿಗೆ ಕಾಲ್ಗೊರಸುಗಳು ಇರುವುದಿಲ್ಲ. ಅವು ಅಂಗಾಲುಗಳಿಂದ ನಡೆಯುತ್ತವೆ. ಆ ಎಲ್ಲಾ ಪ್ರಾಣಿಗಳು ನಿಮಗೆ ಅಶುದ್ಧ. ಅವುಗಳ ಸತ್ತದೇಹಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. (Verses 26-27)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.
Kannada BSI Bible 2016
ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಯಾವವಂದರೆ, ಯಾವ ಪಶುವು ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳು ಯಾವನಿಗೆ ಸೋಂಕುವವೋ ಅವನು ಅಶುದ್ಧನಾಗುವನು.
Kannada Bible (KNCL) BSI 2016
ಅವು ಯಾವುವೆಂದರೆ, ಯಾವ ಪ್ರಾಣಿ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳು ಯಾವನಿಗೆ ಸೋಂಕುವುವೋ ಅವನು ಅಶುದ್ಧನಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು.