Leviticus 11:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವುದೇ ವಸ್ತುವಿನ ಮೇಲೆ ಬಿದ್ದರೆ, ಆಗ ಆ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಶೋಕಬಟ್ಟೆಯಾಗಲಿ ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
Kannada BSI Bible 2016
ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವದೋ ಆ ವಸ್ತುವು ಅಶುದ್ಧವಾಗಿರುವದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವದು; ತರುವಾಯ ಶುದ್ಧಿಯಾಗುವದು.
Kannada Bible (KNCL) BSI 2016
ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.