Leviticus 11:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತ ಪ್ರಾಣಿಯ ಯಾವುದೇ ಭಾಗ ಯಾವುದೇ ವಸ್ತುವಿನ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗಿದೆ. ಅದು ಮಣ್ಣಿನ ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಆ ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅವು ನಿಮಗೆ ಯಾವಾಗಲೂ ಅಶುದ್ಧವಾಗಿರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
Kannada BSI Bible 2016
ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವದು. ಒಲೆಗಳಲ್ಲಿ ಅದು ಒಂಟೊಲೆಯಾಗಿದ್ದರೂ ಜೋಡೊಲೆಯಾಗಿದ್ದರೂ ಅದು ಅಶುದ್ಧವಾದದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
Kannada Bible (KNCL) BSI 2016
ಆ ಜಂತುಗಳ ಹೆಣ ಯಾವ ವಸ್ತುಗಳ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು. ಅದು ಅಶುದ್ಧವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಅದು ಅಶುದ್ಧವಾಗಿರುವುದು. ಅದು ಹರಿವಾಣವಾಗಿದ್ದರೂ, ಮಣ್ಣುಗಳ ಒಲೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಏಕೆಂದರೆ ಅವು ಅಶುದ್ಧವಾಗಿವೆ. ಅವು ನಿಮಗೆ ಅಶುದ್ಧವೇ.