Leviticus 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಪಶುಗಳು ಮೆಲಕು ಹಾಕುತ್ತವೆ, ಆದರೆ ಅವುಗಳ ಕಾಲ್ಗೊರಸು ಸೀಳಿರುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಒಂಟೆಗಳು, ಬೆಟ್ಟದ ಮೊಲಗಳು ಮತ್ತು ಮೊಲಗಳು ಮೆಲಕುಹಾಕುತ್ತವೆ. ಆದರೆ ಅವುಗಳ ಗೊರಸು ಸೀಳಿರುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ. (Verses 4-6)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
Kannada BSI Bible 2016
ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಿರುವದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸುಸೀಳಿದ್ದರೂ ಮೆಲಕು ಹಾಕುವದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ದೃಷ್ಟಾಂತ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
Kannada Bible (KNCL) BSI 2016
ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ ಒಂಟೆ ಮೆಲುಕುಹಾಕುವಂಥದ್ದಾದರೂ ಅದಕ್ಕೆ ಸೀಳು ಗೊರಸು ಇಲ್ಲ. ಆದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದು ತಿಳಿಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ.