Leviticus 11:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Kannada BSI Bible 2016
ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಣದಲ್ಲಿ ಸ್ವಲ್ಪವಾಗಿ ತಿಂದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.
Kannada Bible (KNCL) BSI 2016
ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.