Leviticus 11:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
Kannada BSI Bible 2016
ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾಗಿರುವದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನೇ ನಾನು; ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.
Kannada Bible (KNCL) BSI 2016
ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.