Leviticus 11:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.
Kannada BSI Bible 2016
ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಂದಿಯ ಗೊರಸು ಸೀಳಿಯದೆ; ಆದರೂ ಅದು ಮೆಲಕು ಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು;
Kannada Bible (KNCL) BSI 2016
ಹಂದಿಯ ಗೊರಸು ಸೀಳಿದೆ. ಆದರೂ ಅದು ಮೆಲುಕು ಹಾಕುವುದಿಲ್ಲ. ಆದ್ದರಿಂದ ಅದು ನಿಮಗೆ ಅಶುದ್ಧ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.