Leviticus 11:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುವ ಜಲಪ್ರಾಣಿಗೆ ರೆಕ್ಕೆಯಿದ್ದು ಮೈಯೆಲ್ಲಾ ಪರೆಪರೆಯಿದ್ದರೆ ನೀವು ಅದನ್ನು ತಿನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
Kannada BSI Bible 2016
ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವವಂದರೆ - ಸಮುದ್ರದಲ್ಲಿಯಾಗಲಿ ನದಿಯಲ್ಲಿಯಾಗಲಿ ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವದೋ ಅದರ ಮಾಂಸವನ್ನು ತಿನ್ನಬಹುದು.
Kannada Bible (KNCL) BSI 2016
ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ, ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.