Leviticus 12:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರಿಗೆ ಹೀಗೆ ಹೇಳು: ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.
Kannada BSI Bible 2016
ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಒಬ್ಬ ಸ್ತ್ರೀ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.
Kannada Bible (KNCL) BSI 2016
“ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು - ‘ಒಬ್ಬ ಮಹಿಳೆ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.