Leviticus 12:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು.
Kannada BSI Bible 2016
ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವಳ ಶುದ್ಧೀಕರಣ ಪೂರ್ತಿಗೆ ಇನ್ನೂ ಮೂವತ್ತು ಮೂರು ದಿವಸ ಹಿಡಿಯುವದು. ಅದು ಪೂರೈಸುವ ತನಕ ಅವಳು ದೇವರ ವಸ್ತುವನ್ನು ಮುಟ್ಟಕೂಡದು, ದೇವಸ್ಥಾನಕ್ಕೆ ಬರಕೂಡದು.
Kannada Bible (KNCL) BSI 2016
ಆಮೇಲೆ ಆಕೆ ಪೂರ್ಣಶುದ್ಧಳಾಗಲು ಮೂವತ್ತುಮೂರು ದಿನಗಳವರೆಗೆ ಕಾದಿರಬೇಕು. ಅದು ಮುಗಿಯುವ ತನಕ ಆಕೆ ದೇವರ ವಸ್ತುಗಳನ್ನು ಮುಟ್ಟಕೂಡದು, ದೇವಸ್ಥಾನಕ್ಕೆ ಬರಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಮೂವತ್ತಮೂರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು. ಅವಳ ಶುದ್ಧೀಕರಣದ ದಿನಗಳು ಪೂರೈಸುವ ತನಕ ಅವಳು ಪರಿಶುದ್ಧವಾದದ್ದನ್ನು ಮುಟ್ಟಬಾರದು, ಇಲ್ಲವೆ ಪರಿಶುದ್ಧ ಸ್ಥಳಕ್ಕೆ ಬರಬಾರದು.