Leviticus 12:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.
Kannada BSI Bible 2016
ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಣ್ಣು ಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು; ಮತ್ತು ಶುದ್ಧೀಕರಣಪೂರ್ತಿಗೆ ಅರುವತ್ತಾರು ದಿವಸ ಹಿಡಿಯುವದು.
Kannada Bible (KNCL) BSI 2016
ಹೆಣ್ಣುಮಗುವನ್ನು ಹೆತ್ತರೆ, ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು; ಮತ್ತು ಪೂರ್ಣಶುದ್ಧಳಾಗಲು ಅರವತ್ತಾರು ದಿನಗಳು ಕಾದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು.