Leviticus 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
Kannada BSI Bible 2016
ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಂಡುಮಗುವನ್ನು ಹೆತ್ತರೂ ಹೆಣ್ಣು ಮಗುವನ್ನು ಹೆತ್ತರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರುಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
Kannada Bible (KNCL) BSI 2016
ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.