Leviticus 12:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆಯು ಕುರಿಮರಿಯನ್ನು ತರಲು ಶಕ್ತಳಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರಬಹುದು. ಅವುಗಳಲ್ಲಿ ಒಂದನ್ನು ಸರ್ವಾಂಗಹೋಮಕ್ಕಾಗಿಯೂ ಇನ್ನೊಂದನ್ನು ಪಾಪಪರಿಹಾರಕ ಯಜ್ಞಕ್ಕಾಗಿಯೂ ತರಬೇಕು. ಯಾಜಕನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಅರ್ಪಿಸಬೇಕು. ಹೀಗೆ ಯಾಜಕನು ಆಕೆಯನ್ನು ಶುದ್ಧಿಗೊಳಿಸುವನು. ಆಗ ಆಕೆಯು ರಕ್ತಸ್ರಾವದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗೆ ಅಥವಾ ಹೆಣ್ಣುಮಗುವಿಗೆ ಜನ್ಮವಿತ್ತ ಸ್ತ್ರೀಯು ಅನುಸರಿಸಬೇಕಾದ ನಿಯಮಗಳು ಇವುಗಳೇ.” (Verses 7-8)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.
Kannada BSI Bible 2016
ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಪರಿಶುದ್ಧತೆ ನಿವೃತ್ತಿಯಾಗಿ ಶುದ್ಧಳಾಗುವಳು. ಗಂಡುಮಗುವನ್ನಾಗಲಿ ಹೆಣ್ಣುಮಗುವನ್ನಾಗಲಿ ಹೆತ್ತವಳಿಗೆ ಇದೇ ವಿಧಿ.
Kannada Bible (KNCL) BSI 2016
ಯಾಜಕನು ಅವುಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳ ಪರವಾಗಿ ದೋಷಪರಿಹಾರ ಮಾಡಿದಾಗ ಅವಳಿಗೆ ರಕ್ತಸ್ರಾವದಿಂದ ಆದ ಅಪರಿಶುದ್ಧತೆ ನಿವಾರಣೆಯಾಗಿ ಶುದ್ಧಳಾಗುವಳು. ಗಂಡು ಮಗು ಹೆತ್ತಾಗಲು, ಹೆಣ್ಣು ಮಗು ಹೆತ್ತಾಗಲು ಅನುಸರಿಸಬೇಕಾದ ವಿಧಿ ಒಂದೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.