Leviticus 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಬಹಳ ಕಾಲದಿಂದ ಅವನ ಚರ್ಮದಲ್ಲಿರುವ ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಯಾಜಕನು ಅವನನ್ನು ಪರೀಕ್ಷಿಸುವುದಕ್ಕಾಗಿ ಸ್ವಲ್ಪ ಸಮಯದವರೆಗೆ ಜನರಿಂದ ಪ್ರತ್ಯೇಕಿಸುವುದಿಲ್ಲ. ಯಾಕೆಂದರೆ ಆ ವ್ಯಕ್ತಿಯು ಈಗಾಗಲೇ ಅಶುದ್ಧನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಅಶುದ್ಧನೆಂದು ನಿರ್ಣಯಿಸಬೇಕು.
Kannada BSI Bible 2016
ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಶುದ್ಧನಾದದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು.
Kannada Bible (KNCL) BSI 2016
ಅದು ಹಳೇ ಕುಷ್ಠರೋಗದ ಗುರುತು. ಅವನು ಅಶುದ್ಧನಾದ್ದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಅವನ ಚರ್ಮದಲ್ಲಿ ದೀರ್ಘಕಾಲದ ಚರ್ಮರೋಗವಾಗಿರುವುದು. ಆಗ ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು ಮತ್ತು ಅವನನ್ನು ಪ್ರತ್ಯೇಕವಾಗಿ ಇರಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು.