Leviticus 13:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬೆಳ್ಳಗಾಗಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.
Kannada BSI Bible 2016
ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ನೋಡುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.
Kannada Bible (KNCL) BSI 2016
ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ಬೆಳ್ಳಗಾಗಿ ಹೋಗಿದ್ದರೆ ಆ ವ್ಯಕ್ತಿಯನ್ನು ಶುದ್ಧನೆಂದು ನಿರ್ಣಯಿಸಬೇಕು, ಅವನು ಶುದ್ಧನಾಗಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಅವನನ್ನು ಪರೀಕ್ಷಿಸಿ, ಆ ವ್ಯಾಧಿಯು ಬೆಳ್ಳಗಾಗಿದ್ದರೆ, ಯಾಜಕನು, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅವನು ಶುದ್ಧನಾಗಿರುವನು.