Leviticus 13:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯಾಜಕನು ಮಚ್ಚೆಯನ್ನು ನೋಡಿದಾಗ ಅದರಲ್ಲಿ ಬಿಳಿರೋಮಗಳು ಇಲ್ಲದಿದ್ದರೆ, ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
Kannada BSI Bible 2016
ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾಜಕನು ನೋಡುವಾಗ ಅದರಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ವಿುಕ್ಕ ಚರ್ಮಕ್ಕಿಂತ ತಗ್ಗಾಗದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
Kannada Bible (KNCL) BSI 2016
ಆದರೆ ಯಾಜಕನು ಪರೀಕ್ಷಿಸಿ ನೋಡುವಾಗ ಅದರಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಮಿಕ್ಕ ಚರ್ಮಕ್ಕಿಂತ ತಗ್ಗಾಗದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾಜಕನು ಅದನ್ನು ಪರೀಕ್ಷಿಸಲು, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದಿದ್ದರೆ ಮತ್ತು ಸ್ವಲ್ಪ ಮಬ್ಬಾಗಿದ್ದರೆ, ಆಗ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.